August 24, 2025
WhatsApp Image 2025-08-15 at 6.11.22 PM

ಉಡುಪಿ: ಎಸ್ ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ ಮಾಡುವುದು‌ ಸಲ್ಲ. ತನಿಖೆಯಿಂದಷ್ಟೇ ಸತ್ಯಾಸತ್ಯತೆ ಹೊರ ಬರಬೇಕಿದೆ ಎಂದರು.

ಧರ್ಮಸ್ಥಳ ವಿಚಾರದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ನಾವೆಲ್ಲರೂ ಧರ್ಮಸ್ಥಳ ಮಂಜುನಾಥನ ಭಕ್ತರು, ಈ ವಿಚಾರವಾಗಿ ಡಿಸಿಎಂ ಅವರ ಹೇಳಿಕೆಗೆ ನನ್ನ ಸಹಮತವಿದೆ. ಎಸ್ ಐ ಟಿ ತನಿಖೆ ಬಗ್ಗೆ ಅಧಿಕಾರಿಗಳು ಗೃಹಸಚಿವರಿಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಹೇಳಿದರು. ‌

ಸಾಮಾಜಿಕ ಜಾಲತಾಣದಲ್ಲಿ ಕ್ಷೇತ್ರ ಮತ್ತು ಧರ್ಮಾಧಿಕಾರಿಗಳನ್ನು ವಿರುದ್ಧ ಅವಹೇಳನ ಮಾಡಲಾಗುತ್ತಿದೆ. ಸೌಜನ್ಯಳಿಗೆ ಅನ್ಯಾಯ ಆಗಿದ್ದರೆ, ನ್ಯಾಯ ಸಿಗಬೇಕು ಮುಸಕುದಾರಿ ಬೇರೆ ಬೇರೆ ಸ್ಥಳವನ್ನು ಗುರುತು ಮಾಡುತ್ತಿದ್ದಾನೆ. ಇದಕ್ಕೆಲ್ಲಾ ಉತ್ತರ ಸಿಗಬೇಕು ಎಂದೆ ಎಸ್ ಐ ಟಿ ರಚನೆಯಾಗಿದೆ. ಆದಷ್ಟು ಬೇಗ ಉತ್ತರ ಸಿಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

About The Author

Leave a Reply