
ಬೆಂಗಳೂರು: ಗಣೇಶ ಚತುರ್ಥಿ ಮತ್ತು ಈದ್-ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಮೆರವಣಿಗೆ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಡಿಜೆ ಬಳಕೆ ನಿಷೇಧಿಸಿ ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸ್ ಜಂಟಿ ಆಯುಕ್ತರು ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ಅವರ ವಿಭಾಗೀಯ ಪೀಠವು ಅರ್ಜಿ ವಿಚಾರಣೆ ನಡೆಸಿತು. ಅರ್ಜಿದಾರ ಶಂಕರ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಮೆರವಣಿಗೆ ಮತ್ತು ಸಾರ್ವಜನಿಕ ಮಂಟಪಗಳಲ್ಲಿ ಡಿಜೆ ನಿಷೇಧದ ಪೊಲೀಸರ ನಿರ್ಧಾರಕ್ಕೆ ಸಮ್ಮತಿ ಸೂಚಿಸಿದೆ.
ಕರ್ನಾಟಕ ಲಘು ಸಂಗೀತ ಮತ್ತು ಸಾಂಸ್ಕೃತಿಕ ಕಲಾವಿದರ ಸಂಘದ ಪದಾಧಿಕಾರಿಯಾಗಿದ್ದ ಶಂಕರ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅರ್ಜಿದಾರ ಶಂಕರ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ಗೌರಿ-ಗಣೇಶ ಹಬ್ಬ ಹಾಗೂ ಈದ್-ಮಿಲಾದ್ ಹಬ್ಬಕ್ಕೆ ಡಿಜೆ ನಿಷೇಧ ವಿಚಾರದಲ್ಲಿ ಪೊಲೀಸರ ನಿರ್ಧಾರಕ್ಕೆ ಅಸ್ತು ಅಂದಿದೆ.