
ಉಡುಪಿಯ ಹೊಟೇಲ್‌ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಪಡೆದ ಪೊಲೀಸರ ತಂಡ ದಾಳಿ ನಡೆಸಿ ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಬಂಧೀತ ಆರೋಪಿಯನ್ನು ಶರತ್ ಯಾನೆ ಫಯಾಜ್ ಎಂದು ಗುರುತಿಸಲಾಗಿದೆ. ಆರೋಪಿಯು ಮಹಿಳೆಯೊಬ್ಬರನ್ನು ಕೆಲಸ ಕೊಡಿಸುವುದಾಗಿ ಉಡುಪಿಗೆ ಕರೆಸಿಕೊಂಡು, ಬಳಿಕ ವೇಶ್ಯಾವಾಟಿಕೆ ನಡೆಸುವ ಉದ್ದೇಶದಿಂದ ಲಾಡ್ಜ್ನಲ್ಲಿ ಇರಿಸಿದ್ದ.
ಅನೈತಿಕ ಚಟುವಟಿಕೆ ನಡೆಯುತ್ತಿರುವ ಅನುಮಾನದಿಂದ ಲಾಡ್ಜ್ನ ಸಿಬ್ಬಂದಿ ಉಡುಪಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಉಡುಪಿ ನಗರ ಠಾಣಾ ಇನ್ಸ್ಪೆಕ್ಟರ್ ಮಂಜುನಾಥ ಬಡಿಗೇರ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಉಡುಪಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.