August 26, 2025
WhatsApp Image 2025-08-26 at 12.23.13 PM

ಬೆಂಗಳೂರು : ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗುರುವಾರ ಆರ್ ಎಸ್ ಎಸ್ (RSS) ಗೀತೆಯನ್ನು ಹಾಡಿದ್ದು, ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಇದೆ ವಿಚಾರವಾಗಿ ವಿರೋಧ ವ್ಯಕ್ತವಾದ ಹಿನ್ನೆಲೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ. ಹೌದು ಕಳೆದ ಗುರುವಾರ ವಿಧಾನಸಭೆಯಲ್ಲಿ ನಿಂತು ಸದನವನ್ನು ಉದ್ದೇಶಿಸಿ ಮಾತನಾಡುತ್ತಾ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಗೀತೆ ಪಠಿಸಿದ್ದಾರೆ.

ಬಿಜೆಪಿ ಶಾಸಕ ಆರ್. ಅಶೋಕ್ ಈ ಅವಘಡದ ಬಗ್ಗೆ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿಕೊಂಡು ಶಿವಕುಮಾರ್ ಅವರ ಪಾತ್ರವನ್ನು ನೇರವಾಗಿ ಪ್ರಶ್ನಿಸಿದ್ದಾರೆ ಇದಕ್ಕೆ ಪ್ರತಿಕ್ರಿಯೆಯಾಗಿ, ಉಪಮುಖ್ಯಮಂತ್ರಿ ಅವರು ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಗೀತೆಯನ್ನು ಪಠಿಸುವ ಮೊದಲು ವಿರೋಧ ಪಕ್ಷವು ಹಳೆಯ ವಾದಗಳನ್ನು ಪುನರಾವರ್ತಿಸುತ್ತಿದೆ ಎಂದು ಆರೋಪಿಸಿದರು. ಈ ಘಟನೆಯ 73 ಸೆಕೆಂಡುಗಳ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಬಿಜೆಪಿ ಸದಸ್ಯರ ಸ್ಪಷ್ಟ ಪ್ರತಿಕ್ರಿಯೆಗಳ ನಡುವೆ ಶಿವಕುಮಾರ್ ಅವರ ವಾಚನವನ್ನು ತೋರಿಸುತ್ತದೆ.

ಇನ್ನು ಇದೆ ವಿಚಾರವಾಗಿ ನಿನ್ನೆ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ MLC ಬಿಕೆ ಹರಿಪ್ರಸಾದ್, ಡಿ.ಕೆ,ಶಿವಕುಮಾರ್ ಅವರು ಡಿಸಿಎಂ ಆಗಿ ಆರ್ ಎಸ್ ಎಸ್ ಗೀತೆ ಹಾಡಿದ್ದರೆ ತಪ್ಪಿಲ್ಲ. ಆದರೆ ಅವರು ಕೆಪಿಸಿಸಿ ಅಧ್ಯಕ್ಷರೂ ಆಗಿರುವುದರಿಂದ ಕಾಂಗ್ರೆಸ್ ಅಧ್ಯಕ್ಷನಾಗಿ ಸದನದಲ್ಲಿ ಆರ್ ಎಸ್ ಎಸ್ ಗೀತೆ ಹಾಡಿದ್ದು ತಪ್ಪು. ಹಾಗಾಗಿ ಅವರು ಕ್ಷಮೆ ಕೇಳಬೇಕು ಎಂದರು. ಆರ್ ಎಸ್ ಎಸ್ ನ್ನು ಮೂರು ಬಾರಿ ದೇಶದಲ್ಲಿ ನಿಷೇಧಿಸಲಾಗಿತ್ತು. ಡಿಸಿಎಂ ಆಗಿ ಅವರು ಸಂಘದ ಪ್ರಾರ್ಥನೆ ಮಾಡಿದ್ದರೆ ಅಭ್ಯಂತರವಿಲ್ಲ. ಆದರೆ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಆರ್ ಎಸ್ ಎಸ್ ಪ್ರಾರ್ಥನೆ ಮಾಡಿರುವುದು ತಪ್ಪು ಎಂದು ಹೇಳಿದ್ದಾರೆ.

About The Author

Leave a Reply