August 27, 2025
WhatsApp Image 2025-08-27 at 10.16.56 AM

ಬೆಳ್ತಂಗಡಿ: ಧರ್ಮ ಧರ್ಮಗಳ ನಡುವೆ, ಜಾತಿಗಳ ಮಧ್ಯೆ ದ್ವೇಷ ಹುಟ್ಟುವಂತೆ ಪ್ರಚೋದನಕಾರಿಯಾಗಿ ಮಾತನಾಡಿ ಅದನ್ನು ಯೂಟ್ಯೂಬ್ ನಲ್ಲಿ ಪ್ರಸಾರ ಮಾಡಿದ್ದ ಬಗ್ಗೆ ವಸಂತ ಗಿಳಿಯಾರ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಾಮಾಜಿಕ ಹೋರಾಟಗಾರ ಶೇಖರ ಲಾಯಿಲ ಅವರು ನೀಡಿದ ದೂರಿನಂತೆ ಸೆಕ್ಷನ್ 196(1)(a), 353(2) ಬಿ.ಎನ್.ಎಸ್ ನಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಶೇಖರ ಲಾಯಿಲ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು, ಬೆಂಗಳೂರಿನಲ್ಲಿ ನಡೆದ ಧರ್ಮ ಸಂರಕ್ಷಣಾ ಸಮಾವೇಶದಲ್ಲಿ ಮಾತನಾಡಿದ ವಸಂತ ಗಿಳಿಯಾರ್ ಬೆಳ್ತಂಗಡಿ ಭಾಗದಲ್ಲಿ ಮಿಷನರಿಗಳ ಪ್ರಭಾವದಿಂದ ಹಿಂದುಗಳ ತುಳಸಿಕಟ್ಟೆಯನ್ನು ಒಡೆಸಿ ಅಲ್ಲಿ ಶಿಲುಬೆಯನ್ನು ಇಡಲಾಗಿತ್ತು. ಗ್ರಾಮಾಭಿವೃದ್ಧಿ ಯೋಜನೆ ಬಂದ ಬಳಿಕ ಶಿಲುಬೆಗಳನ್ನು ತೆಗೆದು ಮತ್ತೆ ತುಳಸಿಕಟ್ಟೆಗಳನ್ನು ಮರು ಸ್ಥಾಪಿಸಿದ್ದರು ಎಂಬುವುದಾಗಿ ಹೇಳಿಕೆ ನೀಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಹೇಳಿಕೆಯಿಂದಾಗಿ ಧರ್ಮ ಧರ್ಮಗಳ ನಡುವೆ ಅಪನಂಬಿಕೆ ಸೃಷ್ಟಿಯಾಗಿ ಘರ್ಷಣೆಗೆ ಕಾರಣವಾಗುತ್ತದೆ ಎಂದು ದೂರಿನಲ್ಲಿ ತಿಳಿಸಿದ್ದು, ಅದರಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

About The Author

Leave a Reply