
ಮಂಗಳೂರು : ಭಾರಿ ಮಳೆಯ ಹಿನ್ನೆಲೆಯಲ್ಲಿ ಮಂಗಳೂರು, ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ ಎಲ್ಲ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಹಾಗೂ ಮೂಲ್ಕಿ, ಮೂಡುಬಿದಿರೆ, ಪುತ್ತೂರು ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆ.28ರಂದು ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಆದೇಶ ಹೊರಡಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿ ಗಳಿಗೆ ರಜೆ ಇರುವುದಿಲ್ಲ.