August 28, 2025
WhatsApp Image 2025-08-28 at 3.13.45 PM

ಉಳ್ಳಾಲ: ತಲಪಾಡಿ ಟೋಲ್ ಗೇಟ್ ಬಳಿಯಲ್ಲಿ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮಗು ಸೇರಿದಂತೆ ಐವರು ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ.

ತಲಪಾಡಿಯ ಟೋಲ್ ಗೇಟ್ ಬಳಿಯಲ್ಲಿ ಇಂದು ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದೆ. ಕೆಸಿ ರೋಡ್ ನಿಂದ ತೆರಳುತ್ತಿದ್ದಂತ ಆಟೋ ರಿಕ್ಷಾ ಹಾಗೂ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ.

ಈ ಅಪಘಾತದಲ್ಲಿ ಕೆಸಿ ರೋಡ್ ಮೂಲದವರೆನ್ನಲಾದಂತ ಐವರು ಮೃತಪಟ್ಟಿರೋದಾಗಿ ಹೇಳಲಾಗುತ್ತಿದೆ. ಮೃತರಲ್ಲಿ ನಾಲ್ವರು ಮಹಿಳೆಯರು, ಮಗು ಕೂಡ ಸೇರಿದೆ. ಆಟೋ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply