

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ.
ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮನೆಯಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಪೂಜಾಶ್ರೀ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂರು ವರ್ಷದ ಹಿಂದೆ ನಂದೀಶ್ ಎಂಬಾತನ ಜೊತೆಗೆ ಪೂಜಾಶ್ರೀ ವಿವಾಹವಾಗಿದ್ದರು. ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ವರದಕ್ಷಿಣೆ ಕಿರುಕುಳ ನೀಡಿ ಟಾರ್ಚನ್ ಕೊಡುತ್ತಿದ್ದರಿಂದ ಗೃಹಿಣಿ ಪೂಜಾಶ್ರೀ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.






