

ಉಡುಪಿ: ಬೈಕ್ ಸ್ಕಿಡ್ ಆಗಿ ಸಹಸವಾರ ಸ್ಥಳದಲ್ಲೇ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಮಣಿಪಾಲ- ಅಲೆವೂರು ರಸ್ತೆಯ ಮಂಚಿ ಇಳಿಜಾರಿನ ತಿರುವಿನಲ್ಲಿ ನಡೆದಿದೆ.
ಮೃತ ಸಹಸವಾರನನ್ನು ಕಟಪಾಡಿ ನಿವಾಸಿ ಮೋಹನ್ (33) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಪ್ರದೀಪ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರು ಕಾಪುವಿನಿಂದ ಮಣಿಪಾಲ ಕಡೆಗೆ ಹೋಗಿ, ಹಿಂದಿರುಗಿ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬೈಕ್ ಸ್ಕಿಡ್ ಆದ ರಭಸಕ್ಕೆ ಸಹಸವಾರ ಪೊದೆಗೆ ಎಸೆಯಲ್ಪಟ್ಟಿದ್ದು, ಆದಿತ್ಯವಾರ ಬೆಳಗ್ಗೆಯವರೆಗೆ ಯಾರು ನೋಡದ ಕಾರಣ ಸ್ಥಳದಲ್ಲೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.