October 13, 2025
WhatsApp Image 2025-09-08 at 12.41.40 PM

ಬೆಂಗಳೂರು: ರಾಜ್ಯಾದ್ಯಂತ ಬರೋಬ್ಬರಿ 12,68,097 ಅನುಮಾನಾಸ್ಪದ ಬಿಪಿಎಲ್ ಕಾರ್ಡ್‌ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 8 ಲಕ್ಷ ರೇಷನ್ ಕಾರ್ಡ್‌ಗಳನ್ನು ರದ್ದುಗೊಳಿಸಲು ಆಹಾರ ಇಲಾಖೆ ಮುಂದಾಗಿದೆ.

ಆಹಾರ ಇಲಾಖೆಯ ವಿಶೇಷ ಕಾರ್ಯಾಚರಣೆ ವೇಳೆ ರಾಜ್ಯದಲ್ಲಿ ಬರೋಬ್ಬರಿ 8 ಲಕ್ಷ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎನ್ನುವ ಮಾಹಿತಿಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯೇ ನೀಡಿದೆ. ಬೆಂಗಳೂರು ನಗರದಲ್ಲೇ 1 ಲಕ್ಷಕ್ಕೂ ಅಧಿಕ ಮಂದಿ ಬಿಪಿಎಲ್ ಕಾರ್ಡ್ ಹೊಂದಿರುವುದು ಪತ್ತೆಯಾಗಿದೆ. ಇಲಾಖೆ ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ 12,68,097 ಅನುಮಾನಾಸ್ಪದ ರೇಷನ್ ಕಾರ್ಡ್‌ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 8 ಲಕ್ಷ ರೇಷನ್ ಕಾರ್ಡ್‌ಗಳನ್ನು ರದ್ದುಗೊಳಿಸಲು ತೀರ್ಮಾನಿಸಲಾಗಿದ್ದು ಈ ಬಗ್ಗೆ ಶೀಘ್ರವೇ ಆಹಾರ ಇಲಾಖೆ ಸರ್ಕಾರಕ್ಕೆ ಈ ಬಗ್ಗೆ ಅಧಿಕೃತ ವರದಿ ಸಲ್ಲಿಸಲಿದೆ.

ಮೃತಪಟ್ಟವರ ಹೆಸರು ಮತ್ತು ನಕಲಿ ಬಿಪಿಎಲ್ ಕಾರ್ಡ್‌ಗಳನ್ನು ಬಳಸಿ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡಿತರ ಪಡೆಯುತ್ತಿರುವ ಅಘಾತಕಾರಿ ಸಂಗತಿಯೂ ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ನಿಗದಿಗಿಂತ ಹೆಚ್ಚುವರಿಯಾಗಿ 14 ಲಕ್ಷ ರೇಷನ್‌ ಕಾರ್ಡ್‌ಳು ಇಲಾಖೆಯಿಂದಲೇ ವಿತರಿಸಲಾಗಿದೆ ಎನ್ನಲಾಗಿದೆ.

About The Author

Leave a Reply