

ಪುತ್ತೂರು: ಮನೆಗೆ ತೆರಳುತ್ತಿದ್ದ ವಿಧ್ಯಾರ್ಥಿನಿಗೆ ಬೈಕ್ ನಲ್ಲಿ ಬಂದು ಕಿರುಕುಳ ನೀಡಿ ಎಸ್ಕೇಪ್ ಆಗಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತನನ್ನು ಪೆರ್ಲಂಪಾಡಿ ನಿವಾಸಿ ಉದಯ ಎಂದು ಗುರುತಿಸಲಾಗಿದೆ. ಕೆಲ ದಿನಗಳ ಹಿಂದೆ ವಿದ್ಯಾರ್ಥಿನಿ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕಿನಲ್ಲಿ ಆಗಮಿಸಿದ ಯುವಕನೋರ್ವ ಕಿರುಕುಳ ನೀಡಿದ್ದಾನೆಂದು ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದರು.
ಕೇಸು ದಾಖಲಿಸಿಕೊಂಡ ಪೊಲೀಸರು ಘಟನೆಯ ಸ್ಥಳದ ಸುತ್ತಮುತ್ತ ಅಳವಡಿಸಲಾಗಿದ್ದ ಸುಮಾರು 15 ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿದ ಬಳಿಕ ಬೈಕ್ ನಂಬರ್ ಪತ್ತೆ ಹಚ್ಚಿದ್ದರು. ಸಿಸಿ ಟಿವಿ ಆಧಾರದ ಮೇಲೆ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ ಆರೋಪಿ ಉದಯ ನನ್ನು ಬಂಧಿಸಿದ್ದಾರೆ.