November 8, 2025
WhatsApp Image 2025-09-17 at 12.34.29 PM

ಮಂಗಳೂರು: ಸಂಚಾರದಲ್ಲಿದ್ದ ಕೆಎಸ್ಆರ್‌ಟಿಸಿ ಬಸ್‌ನಲ್ಲೇ ಸೀಟ್‌ ಪಕ್ಕದಲ್ಲಿ ಕುಳಿತಿದ್ದ ಯುವತಿಗೆ ಕಿರುಕುಳ ನೀಡಿರುವ ಯುವಕನ ಮೇಲಿನ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಕಾಮುಕನಿಗೆ ಪ್ರಧಾನ ಹಿರಿಯ ಸಿವಿಲ್ ಮತ್ತು ಎ ಸಿ ಜೆ ಎಂ ನ್ಯಾಯಾಲಯವು ನಾಲ್ಕು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದೆ.

2022ರ ಎಪ್ರಿಲ್ 22ರಂದು ಯುವತಿ ಕೆಎಸ್ಆರ್‌ಟಿಸಿ ಬಸ್‌‌ನಲ್ಲಿ ಸುಳ್ಯದಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದಳು. ಈ ಸಂದರ್ಭ ಯುವತಿ ಕುಳಿತಿದ್ದ ಸೀಟಿನ ಪಕ್ಕದಲ್ಲಿ ಕುಳಿತಿದ್ದ ಆರೋಪಿತ ಮಾಡ್ನೂರು ಗ್ರಾಮದ ನಿವಾಸಿ ಮೊಹಮ್ಮದ್ ಸತ್ತಾರ್ ಎಂಬಾತ  ಲೈಂಗಿಕ ಕಿರುಕುಳ ನೀಡಿದ್ದಾನೆ. 

ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿ ಪುತ್ತೂರು ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಜೇಶ್ ಕೆ ವಿ ಅವರು ಆರೋಪಿಯ ವಿರುದ್ಧ ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. 

ಪ್ರಧಾನ ಹಿರಿಯ ಸಿವಿಲ್ ಮತ್ತು ಎ ಸಿ ಜೆ ಎಂ ನ್ಯಾಯಾಲಯದ ನ್ಯಾಯಾಧೀಶೆ ಪ್ರಕೃತಿ ಕಲ್ಯಾಣಪುರ್ ಅವರು ಆರೋಪಿಯ ಮೇಲಿನ ಆರೋಪ ಸಾಬೀತಾಗಿದೆ ಎಂದು ನಾಲ್ಕು ತಿಂಗಳಗಳ ಕಾರಗೃಹವಾಸ ಮತ್ತು 10,000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.  ದಂಡ ನೀಡಲು ತಪ್ಪಿದಲ್ಲಿ ಒಂದು ತಿಂಗಳ ಕಾಲ ಹೆಚ್ಚುವರಿ ಕಾರಗೃಹವಾಸ ಶಿಕ್ಷೆಯನ್ನು ವಿಧಿಸಿರುತ್ತಾರೆ. ಸರ್ಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ಕವಿತಾ ಕೆ. ವಾದಿಸಿರುತ್ತಾರೆ.

About The Author

Leave a Reply