October 12, 2025
WhatsApp Image 2025-09-19 at 10.12.25 AM

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವೆಚ್ಚಗಳಿಗಾಗಿ ಪ್ರತೀ ಜೋಡಿಗೆ 50,000 ರೂ. ನೀಡುವ ಕಾರ್ಯಕ್ರಮವನ್ನು ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲಾಗಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಫಲಾನುಭವಿಗಳು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಉಡುಪಿ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ:0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

About The Author

Leave a Reply