November 8, 2025
WhatsApp Image 2025-06-30 at 1.21.23 PM

ವಿವಿ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಐವರು ಉಪನ್ಯಾಸಕರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಬೆಂಗಳೂರು ವಿವಿ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಐವರು ಉಪನ್ಯಾಸಕರ ವಿರುದ್ಧ ಜ್ಞಾನ ಭಾರತಿ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಅತಿಥಿ ಉಪನ್ಯಾಸಕರಾದ ಸ್ವರೂಪ್ ಕುಮಾರ್, ರಾಮಾಂಜನೇಯ ಸೇರಿ ಐವರ ವಿರುದ್ಧ ದೂರು ದಾಖಲಾಗಿದೆ.

FIR ದಾಖಲಾದ ಬೆನ್ನಲ್ಲೇ ಉಪನ್ಯಾಸಕರ ಹಲವು ವಿಡಿಯೋಗಳು ವೈರಲ್ ಆಗಿವೆ. ಮಕ್ಕಳಿಗೆ ಪಾಠ ಮಾಡುವ ಉಪನ್ಯಾಸಕರಿಂದಲೇ ಕುಡಿದು ಡ್ಯಾನ್ಸ್ ಮಾಡುವ ವಿಡಿಯೋ ವೈರಲ್ ಆಗಿವೆ . ಮದ್ಯ ಸೇವಿಸಿ ಅತಿಥಿ ಉಪನ್ಯಾಸಕ ರಾಮಾಂಜನೇಯ ಡ್ಯಾನ್ಸ್ ಮಾಡಿದ್ದಾನೆ.ಶರ್ಟ್ ಬಿಚ್ಚಿ ಕುಡಿದು ಬೆಂಗಳೂರು ವಿಶ್ವವಿದ್ಯಾಲಯ ಆವರಣದಲ್ಲಿ ಡ್ಯಾನ್ಸ್ ಮಾಡಿದ್ದಾನೆ. ಉಪನ್ಯಾಸಕ ರಾಮಾಂಜನೇಯ ವಿರುದ್ಧ ಇದೀಗ ಸಾಲ ಸಾಲು ಆರೋಪಗಳು ಕೇಳಿಬಂದಿವೆ.

ಇಂಟರ್ನಲ್ ಮಾರ್ಕ್ಸ್ ನೀಡಲು ಹಣಕ್ಕೆ ಬೇಡಿಕೆ ಇಟ್ಟ ಆರೋಪ, ಕಣ್ಣು ಕಾಣದ ವಿದ್ಯಾರ್ಥಿಗೆ ಇಂಟರ್ನಲ್ ನೀಡಲು ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ನೇತ್ರಾನಂದ ಎಂಬ ಅಂದ ವಿದ್ಯಾರ್ಥಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ವಿದ್ಯಾರ್ಥಿನಿ ಜೊತೆಗೆ ಡ್ಯಾನ್ಸ್ ಮಾಡಿದ್ದಾನೆ. ವಿದ್ಯಾರ್ಥಿಯನ್ನು ಎತ್ತಿಕೊಂಡು ಉಪನ್ಯಾಸಕ ಡ್ಯಾನ್ಸ್ ಮಾಡಿರೋ ವಿಡಿಯೋ ಸಹ ವೈರಲ್ ಆಗಿದೆ.

About The Author

Leave a Reply