November 8, 2025
WhatsApp Image 2025-09-20 at 3.08.44 PM

ತಡರಾತ್ರಿ ಬೆಂಗಳೂರು ನಗರದಾದ್ಯಂತ ಸುಮಾರು 1,500ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.ಈ ವೇಳೆ ಅಪರಾಧದ ಕೃತ್ಯದಲ್ಲಿ ಭಾಗಿಯಾಗದಂತೆ ಪೊಲೀಸರು ರೌಡಿಶೀಟರ್ ಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಹೌದು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಸರಗಳ್ಳತನ, ದರೋಡೆ ಸೇರಿದಂತೆ ಸಣ್ಣ-ಪುಟ್ಟ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿದ್ದು, ಇವುಗಳನ್ನು ನಿಯಂತ್ರಿಸಲು ಹಾಗೂ ಅಪರಾಧ ಹಿನ್ನೆಲೆಯುಳ್ಳವರ ಮೇಲೆ ನಿಗಾ ವಹಿಸಲು ಶುಕ್ರವಾರ ತಡರಾತ್ರಿ ನಗರದಾದ್ಯಂತ ಹಲವು ರೌಡಿಶೀಟರ್‌ಗಳ ಮನೆಗಳ ಮೇಲೆ ಬೆಂಗಳೂರು ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.

ಹಲಸೂರು, ಬಾಣಸವಾಡಿ, ಇಂದಿರಾನಗರ, ಹೆಣ್ಣೂರು, ರಾಮಮೂರ್ತಿನಗರ, ಭಾರತಿನಗರ, ಶಿವಾಜಿನಗರ, ಆಡುಗೋಡಿ, ಕುಮಾರಸ್ವಾಮಿ ಲೇಔಟ್​, ತಿಲಕ್ ನಗರ ಸೇರಿದಂತೆ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಗಳ ಮನೆಗಳ ಮೇಲೆ ಈ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

About The Author

Leave a Reply