November 8, 2025
WhatsApp Image 2025-09-21 at 9.26.45 AM

ಕನ್ನಡದ ಜಯಪ್ರಿಯ ಯೂಟ್ಯೂಬರ್ ಮುಕಳೆಪ್ಪ ನಕಲಿ ದಾಖಲೆ ನೀಡಿ ಹಿಂದೂ ಯುವತಿಯನ್ನು ಮದುವೆಯಾಗಿದ್ದಾರೆ. ಈ ಪ್ರಕರಣದ ವಿರುದ್ಧ ಬಜರಂಗದಳ ಕಾರ್ಯಕರ್ತರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಲವ್‌ ಜಿಹಾದ್ ಆರೋಪ ಮಾಡಿರುವ ಕಾರ್ಯಕರ್ತರು, ಮುಕಳೆಪ್ಪ ಸುಳ್ಳು ದಾಖಲೆ ನೀಡಿ ಹಿಂದೂ ಯುವತಿಯನ್ನ ಮದುವೆಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ಯುವತಿಯ ತಂದೆ ತಾಯಿ, ಮುಕಳೆಪ್ಪ ನನ್ನ ಮಗಳನ್ನು ಟೂರ್ ಗೆ ಕರೆದುಕ್ಕೊಂಡು ಹೋಗುತ್ತಿದ್ದ. ನಾವು ಹಳ್ಳಿಯವರು ಎಲ್ಲೂ ಹೋಗಲ್ಲ. ನನ್ನ ಮಗಳು ದೊಡ್ಡ ಹೆಸರು ಮಾಡಬಹುದು ಅಂತಾ ಮುಕಳೆಪ್ಪನ ಜೊತೆ ವಿಡಿಯೋ ಮಾಡಲು ಹೋಗುತ್ತಿದ್ದಳು. ನಾವು ವಿಡಿಯೋ ಮಾಡಲು ಕಳುಹಿಸಿಕೊಡುತ್ತಿದ್ದೆವು. ಅವನು ಈಗ ನನ್ನ ಮಗಳು ಗಾಯತ್ರಿಗೆ ಮೋಸ ಮಾಡಿದ್ದಾನೆ. ನಮ್ಮ ಹಿಂದೂ ಮಂದಿ ಏನ್ ಶಿಕ್ಷೆ ಕೊಡುತ್ತೀರೋ ಕೊಡಿ. ನನ್ನ ಮಗಳನ್ನ ಕರೆತಂದು ನನಗೆ ಒಪ್ಪಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

ತಮ್ಮ ಮಗಳನ್ನು ಪುಸಲಾಯಿಸಿ ಮುಕುಳೆಪ್ಪ ಮದುವೆ ಆಗಿದ್ದಾನೆ. ನಮ್ಮ ಮಗಳು ದೊಡ್ಡ ಮಟ್ಟದಲ್ಲಿ ಬೆಳಿತಾಳೆ ಅಂತ ನಾವು ಮುಕುಳೆಪ್ಪ ಜೊತೆಗೆ ವಿಡಿಯೋ ಮಾಡಲು ಅನುಮತಿ ನೀಡಿದ್ದೆವು. ಅದೇ ನಾವು ಮಾಡಿದ ದೊಡ್ಡ ತಪ್ಪು, ಹಿಂದೂ ಸಮಾಜ ನಮ್ಮ ಬೇಕಾಗದ್ದು ಶಿಕ್ಷೆ ನೀಡಲಿ. ಚಿತ್ರೀಕರಣ ಇದೆ ಅಂದಿದ್ದಕ್ಕೆ ಮೂರ್ನಾಲ್ಕು ದಿನ ಟೂರ್ ಗೆ ಕರೆದುಕೊಂಡು ಹೋಗುತ್ತಿದ್ದ. ಆದರೆ ಮುಕುಳೆಪ್ಪ ನಮ್ಮ ಮಗಳ ತಲೆ ಕೆಡಿಸುತ್ತಿದ್ದಾನೆ ಅಂತ ಗೊತ್ತಾಗಿಲ್ಲ. ನಮ್ಮಿಂದ ತಪ್ಪಾಯಿತು ಎಂದು ಯುವತಿಯ ತಂದೆ ತಾಯಿ ಆಳಲು ತೋಡಿಕೊಂಡಿದ್ದಾರೆ.

About The Author

Leave a Reply