

ಬಂಟ್ವಾಳ: ಯುವಕನೋರ್ವ ಆಕಸ್ಮಿಕವಾಗಿ ನೀರು ತುಂಬಿದ್ದ ಹೊಂಡಕ್ಕೆ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಸಜೀಪದ ಕಂಚಿನಡ್ಕಪದವು ಎಂಬಲ್ಲಿ ನಡೆದಿದೆ.
ಮೃತ ಯುವಕನನ್ನು ಉಳ್ಳಾಲ ತಾಲೂಕಿನ ಇರಾ ಸಮೀಪದ ಸೂತ್ರಬೈಲು ನಿವಾಸಿ ಉಮ್ಮರ್ ಅವರ ಪುತ್ರ ಅಬ್ದುಲ್ ಅಮೀರ್ (23) ಎಂದು ಗುರುತಿಸಲಾಗಿದೆ.
ಅಮೀರ್ ಕೂಲಿ ಕೆಲಸ ಮಾಡಿಕೊಂಡಿದ್ದು, ಸೆ. 20 ರಂದು ಸಂಜೆ ಶಂಶೀರ್, ಇಕ್ಬಾಲ್ ಮತ್ತು ರಿಜ್ವಾನ್ ಅವರ ಜತೆ ಸಜೀಪಮೂಡ ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಕೆಲಸಕ್ಕೆ ಹೋಗಿದ್ದು, ಸಂಜೆ ಕೆಲಸ ಮುಗಿಸಿ ಅಲ್ಲೇ ಸಮೀಪದಲ್ಲಿದ್ದ ನೀರು ತುಂಬಿದ್ದ ಹೊಂಡಕ್ಕೆ ಕೈಕಾಲು ಮುಖ ತೊಳೆಯಲು ಹೋದ ವೇಳೆ ಘಟನೆ ನಡೆದಿದೆ.
ನೀರಿಗೆ ಬಿದ್ದು ಗಂಭೀರ ಸ್ಥಿತಿಯಲ್ಲಿದ್ದ ಅಮೀರ್ ನನ್ನು ಕೂಡಲೇ ದೇರಳಕಟ್ಟೆಯ ಆಸ್ಪತ್ರೆಗೆ ಸೇರಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು.
ಘಟನೆಯ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.