

ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟೂರಿಸ್ಟ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಆರ್ಯಾಪು ಗ್ರಾಮದ ಸಂಟ್ಯಾರು-ಪರ್ಪುಂಜ ಎಂಬಲ್ಲಿ ನಡೆದಿದೆ.
ಪುತ್ತೂರಿನಿಂದ ಬೆಳ್ಳಾರೆ ಕಡೆಗೆ ತೆರಳುತ್ತಿದ್ದ ಬಸ್‌ಗೆ, ಸುಳ್ಯ ದಿಕ್ಕಿನಿಂದ ಪುತ್ತೂರಿನತ್ತ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಕಾರು ಚಾಲಕ ಅತೀ ವೇಗ ಹಾಗೂ ಅಜಾಗರೂಕತೆಯಿಂದ ತಪ್ಪು ದಿಕ್ಕಿನಲ್ಲಿ ಹೋಗಿ ಬಸ್‌ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ.
ಡಿಕ್ಕಿಯ ರಭಸಕ್ಕೆ ಕಾರು ತಿರುಗಿ ವಿರುದ್ಧ ದಿಕ್ಕಿನಲ್ಲಿ ನಿಂತಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ. ಆದರೆ ಕಾರಿನಲ್ಲಿ ಇದ್ದ ಚಾಲಕ ಸೇರಿ ಇಬ್ಬರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.