

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಕುಂದಾಪುರ ತಾಲ್ಲೂಕಿನ ರಂಗನಾಥ ಬೆಳ್ಳಾಲ ಎಂಬಾತ, ಬಿ.ಸಿ.ರೋಡ್ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ವೇಳೆ, ಅವರ ಜೇಬಿನಿಂದ ₹50,000 (ಪ್ರತಿ ₹25,000ರ 2 ಕಟ್ಟ) ಕಳ್ಳತನವಾಗಿತ್ತು. ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 91/2025 ಕಲಂ 303(2) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆಯ ಮೇರೆಗೆ ಪೊಲೀಸರು ಸೆ.19, 2025ರಂದು ಮಂಗಳೂರಿನ ಹಂಪನಕಟ್ಟೆಯಲ್ಲಿ ಕೇರಳದ ತ್ರಿಶೂರ್ ಜಿಲ್ಲೆಯ ಚಾವಕ್ಕಾಡು ಗ್ರಾಮದ ನಜೀರ್ (55) ಎಂಬಾತನನ್ನು ಬಂಧಿಸಿದರು. ಅವನಿಂದ ಕಳವಾದ ಹಣದಲ್ಲಿ ₹22,000 ವಶಪಡಿಸಿಕೊಳ್ಳಲಾಗಿದೆ.ಬಂಧಿತನನ್ನು ಸೆ.20ರಂದು ಬಂಟ್ವಾಳ ಏ.ಸಿ.ಜೆ & ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.