

ಬಂಟ್ವಾಳ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಪೊಲೀಸರು ವಾಹನ ತಪಾಸಣೆಗೆ ಮುಂದಾದಾಗ ಪಿಕಪ್ ಚಾಲಕ ಪರಾರಿಯಾಗಿದ್ದಾನೆ.ಬಂಟ್ವಾಳದ ಅಬಕಾರಿ ನಿರೀಕ್ಷಕರಾದ ಲಕ್ಷ್ಮಣ್ ಅವರಿಗೆ ದಿನಾಂಕ 25-09-2025 ರಂದು ಕರ್ತವ್ಯದಲ್ಲಿದ್ದಾಗ ಸಂಜೆ 5.20 ರ ಸುಮಾರಿಗೆ ಅಬಕಾರಿ ಉಪ ಆಯುಕ್ತರು ದ.ಕ ಜಿಲ್ಲೆ ಮಂಗಳೂರು ರವರ ನಿರ್ದೇಶನದಂತೆ ಕೆಎ-70-6904 ನೇ ಬೊಲೋರೋ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಮಾಧಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದಾರೆ ಎಂಬುವುದಾಗಿ ಮಾಹಿತಿ ಬಂದಿದೆ.
ಆ ವಾಹನವನ್ನು ತಡೆದು ತಪಾಸಣೆ ನಡೆಸುವಂತೆ ತಿಳಿಸಿದ ಮೇರೆಗೆ ತಮ್ಮ ಸಿಬ್ಬಂದಿಯೊಂದಿಗೆ ಕಾಯುತ್ತಿದ್ದಾಗ ಮಂಗಳೂರು ಕಡೆಯಿಂದ ಬಂದ ಪಿಕ್ ಅಪ್ ನ್ನು ನಿಲ್ಲಿಸಲು ಸೂಚನೆ ನೀಡಿದರೂ ಇಲಾಖಾ ವಾಹನವನ್ನು ನೋಡಿದ ಪಿಕ್‌ಅಪ್ ಚಾಲಕನು ಪಿಕ್ ಅಪ್ ವಾಹನವನ್ನು ಅತೀ ವೇಗವಾಗಿ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಪಾಣೆಮಂಗಳೂರು ಹಳೇ ಸೇತುವೆಯಿಂದ ಚಲಾಯಿಸಿಕೊಂಡು ಹೋಗಿ ನಂದಾವರ ರೈಲ್ವೇ ಟ್ರ್ಯಾಕ್ ಬಳಿ ಖಾಲಿ ಜಾಗದಲ್ಲಿ ನಿಲ್ಲಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.