November 8, 2025
WhatsApp Image 2025-09-30 at 11.17.48 AM

ಪಡುಬಿದ್ರೆ: ಇಲ್ಲಿಗೆ ಸಮೀಪದ ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಬೆಳಗಿನ ಜಾವ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಬಗ್ಗೆ ವರದಿಯಾಗಿದೆ

ಮೃತ ಬೈಕ್ ಸವಾರನ ಗುರುತು ಇನ್ನೂ ಪತ್ತೆಯಾಗಿಲ್ಲ. ಉಡುಪಿ ಕಡೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಪುತ್ತೂರು ನೋಂದಣಿ ಇರುವ ಬೈಕಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ.

ಮೃತದೇಹವನ್ನು ಸಾಮಾಜಿಕ ಕಾರ್ಯಕರ್ತ ಜಮಾಲುದ್ದೀನ್ ಉಚ್ಚಿಲ, ಮೂಳೂರು‌ ಅಂಬುಲೆನ್ಸ್ ನ ಹಮೀದ್, ರೈಸ್, ರಜಾಕ್, ಅನ್ವರ್ ಕೋಟೇಶ್ವರ, ಸಾದಿಕ್ ಮತದಾನವನ್ನು ಪಡುಬಿದ್ರೆಯ ಸಹಕಾರಕ್ಕೆ ಸಾಗಿಸಲು ಸಹಕರಿಸಿದರು. ಸ್ಥಳಕ್ಕೆ ಆಗಮಿಸಿರುವ ಪಡುಬಿದ್ರೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

About The Author

Leave a Reply