November 8, 2025
WhatsApp Image 2025-10-03 at 3.07.28 PM

ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು, ಪುತ್ರಿಯನ್ನು ಮಚ್ಚಿನಿಂದ ಕೊಲೆ ಮಾಡಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಮಚ್ಚಿನಿಂದ ಕೊಚ್ಚಿ ತಾಯಿ ಸೂಸೈಡ್ ಮಾಡಿಕೊಂಡಿದ್ದಾರೆ. ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಯ ಕ್ವಾಟರ್ಸ್ ನಲ್ಲಿ ಈ ಒಂದು ಘಟನೆ ನಡೆದಿದೆ.

ಕೊಲೆ ಮಾಡಿ 36 ವರ್ಷದ ಶ್ರುತಿ ಪುತ್ರಿ ಪೂರ್ವಿಕಳನ್ನು (11) ಮಚ್ಚಿನಿಂದ ಕೊಂದ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿವಮೊಗ್ಗದ ಶರಾವತಿ ನಗರದಲ್ಲಿ ಜಿಲ್ಲಾ ಆಸ್ಪತ್ರೆ ಕ್ವಾರ್ಟರ್ ನಲ್ಲಿ ಈ ಘಟನೆ ನಡೆದಿದ್ದು ಪತಿ ರಾಮಣ್ಣ ಕೆಲಸಕ್ಕೆ ತೆರಳಿದ್ದಾಗ ಪುತ್ರಿಯನ್ನು ಕೊಂದು ಶೃತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡ್ಯೂಟಿ ಮುಗಿಸಿ ರಾಮಣ್ಣ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮೇಲ್ನೋಟಕ್ಕೆ ಶೃತಿ ಮಾನಸಿಕ ಅಸ್ವಸ್ಥತೆ ಎಂದು ತಿಳಿದುಬಂದಿದೆ. ಈ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಘಟನೆ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

About The Author

Leave a Reply