November 8, 2025
WhatsApp Image 2025-10-04 at 9.28.06 AM

ಕಾರ್ಕಳ : ತಾಯಿಯೋರ್ವಳು ತನ್ಮ ಮಗಳನ್ನೇ ಹತ್ಯೆಗೈದಿರುವ ಘಟನೆ ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಕಾನಂಗಿ ಎಂಬಲ್ಲಿ ವರದಿಯಾಗಿದೆ. 17 ವರ್ಷದ ಶಿಫನಾಜ್ ಕೊಲೆಯಾದ ಯುವತಿ. ಸೆ. 20ರಂದು ಶಿಫನಾಜ್ ತನ್ನ ಸ್ನೇಹಿತನನ್ನು ಭೇಟಿಯಾಗಲು ಉಡುಪಿಗೆ ಹೋಗಿ ಬರುವುದಾಗಿ ತಾಯಿಯಲ್ಲಿ ಹೇಳಿದ್ದು ಅದಕ್ಕೆ ತಾಯಿ ಗುಲ್ಬಾರ್ ಬಾನು (45) ನಿರಾಕರಿಸಿದ್ದಳು. ಇದರಿಂದ ತಾಯಿ ಹಾಗೂ ಮಗಳ ಮಧ್ಯೆ ಜಗಳವಾಗಿ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. ಮಗಳ ಕುತ್ತಿಗೆ ಬಿಗಿಹಿಡಿದು ಉಸಿರುಗಟ್ಟಿಸಿ ಶಿಫನಾಜ್‌ಳನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.

ಶಿಫನಾಜ್ ಸೆ. 20ರಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ಶಿಫನಾಜ್ ತಂದೆ ಶೇಖ್ ಮುಸ್ತಾಫ್ ದೂರು ನೀಡಿದ್ದು, ಶಿಫನಾಜ್ ಆಕೆಯ ಸ್ನೇಹಿತ ಮಹಮ್ಮದ್ ಸಲೀಂನನ್ನು ಉಡುಪಿಯಲ್ಲಿ ಭೇಟಿಯಾಗಲು ಹೋಗುವುದಾಗಿ ತಾಯಿಯಲ್ಲಿ ಹೇಳಿರುತ್ತಾಳೆ. ಈ ವಿಚಾರವಾಗಿ ತಾಯಿ ಮಗಳ ಮಧ್ಯೆ ಜಗಳವಾಗಿದ್ದು ಕೋಪಗೊಂಡ ಶಿಫನಾಜ್ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದರು.

ಬಳಿಕ, ಶಿಫನಾಜ್ ಸಾವು ಆತ್ಮಹತ್ಯೆಯಲ್ಲ. ಉಸಿರುಗಟ್ಟಿಸಿ ಆಕೆಯನ್ನು ಕೊಲೆ ಮಾಡಲಾಗಿದೆ ಎನ್ನುವ ವರದಿ ಪೋಸ್ಟ್ ಮಾರ್ಟಂನಿಂದ ತಿಳಿದುಬಂತು. ಸಾವಿನ ಸತ್ಯ ಸಂಗತಿ ಪೋಸ್ಟ್ ಮಾರ್ಟಂನಿಂದ ಬಹಿರಂಗಗೊಳ್ಳುತ್ತಿದ್ದಂತೆ ಗುಲ್ಬಾರ್ ಬಾನುಳನ್ನು ಪೊಲೀಸರು ತೀವ್ರ ವಿಚಾರಣೆ ನಡೆಸಿದರು. ಈ ವೇಳೆ ತಾನು ಕೊಲೆ ಮಾಡಿರುವ ವಿಚಾರ ಒಪ್ಪಿಕೊಂಡಿಗಾಕಿ ಅ. 2ರಂದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆ ನ್ಯಾಯಾಲಯಕೆ. ಹಾಜರುಪಡಿಸಿದ್ದಾರೆ.

About The Author

Leave a Reply