February 21, 2026
WhatsApp Image 2025-09-16 at 10.18.54 AM

ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಇದೀಗ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುಪ್ಪಂಪಾಳ್ಯ ಬಳಿ ಇಬ್ಬರು ಬಾಲಕಿಯರ ಶವ ಪತ್ತೆಯಾಗಿದೆ. ಅಕ್ಟೋಬರ್ 2 ರಂದು ಮುಳಬಾಗಿಲು ತಾಲೂಕಿನ ಯಳಚೇಪಲ್ಲಿ ಇಂದ ಇಬ್ಬರು ಬಾಲಕಿಯರು ನಾಪತ್ತೆಯಾಗಿದ್ದರು.

ಧನ್ಯ ಬಾಯಿ (13) ಹಾಗೂ ಚೈತ್ರಾ ಬಾಯಿ (13) ನಾಪತ್ತೆಯಾಗಿದ್ದರು. ಇದೀಗ ಮುಳಬಾಗಿಲು ತಾಲೂಕಿನ ಕುಪ್ಪಂಪಾಳ್ಯ ಬಳಿ ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದುಷ್ಕರ್ಮಿಗಳು ಬಾಲಕಿಯರನ್ನು ಕೊಂದು ಶವ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply