

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಪ್ರಕರಣದ ಆದೇಶವನ್ನು ಸೆ. 9ಕ್ಕೆ ಕಾಯ್ದಿರಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್ನಲ್ಲಿ ಅ. 4ರಂದು ವಿಚಾರಣೆ ನಡೆಯಿತು. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದವು.
ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲಾಯಿತು. ವಾದ ಪ್ರತೀವಾದವನ್ನು ಆಲಿಸಿದ ನ್ಯಾಯಾಧೀಶರು ಅ. 9ಕ್ಕೆ ಆದೇಶ ಕಾಯ್ದಿರಿಸಿ ಆದೇಶ ಹೊರಡಿಸಿದ್ದಾರೆ.






