October 12, 2025
WhatsApp Image 2025-10-09 at 5.32.57 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ, ಖಾಸಗಿ ಉದ್ಯೋಗಸ್ಥ ಮಹಿಳೆಯರಿಗೆ ತಿಂಗಳಲ್ಲಿ ಒಂದು ದಿನ ವೇತನ ಸಹಿತ ಋತುಚಕ್ರ ರಜೆ ನೀಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ನಿರ್ಧಾರವನ್ನು ಸ್ವಾಗತಿಸಿರುವಂತ ರಾಜ್ಯ ಸರ್ಕಾರಿ ನೌಕರರ ಸಂಘವು, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಗೆ ಧನ್ಯವಾದವನ್ನು ತಿಳಿಸಿದ್ದಾರೆ.

ಈ ಕುರಿತಂತೆ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ರಾಜ್ಯ ಮಹಿಳಾ ಸರ್ಕಾರಿ ನೌಕರರಿಗೆ ಹಾಗೂ ಖಾಸಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ನೌಕರರಿಗೆ ವೇತನ ಸಹಿತ ಋತು ಚಕ್ರ ರಜೆ ಮಂಜೂರಾತಿಗೆ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದಿದ್ದಾರೆ.

1. ಒಡಿಶಾ ಸರ್ಕಾರ 2024ರಲ್ಲಿ ಈ ರಜಾ ಸೌಲಭ್ಯವನ್ನು ಜಾರಿಗೆ ತಂದಿತ್ತು.
2. ಇದೇ ಮಾದರಿಯಲ್ಲಿ ಕರ್ನಾಟಕದಲ್ಲಿ ಜಾರಿಗೆ ತರಲು ದಿನಾಂಕ 10.01.2025 ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಂಘವು ಮನವಿ ಸಲ್ಲಿಸಿತ್ತು, ಅದರಂತೆ ಸಚಿವ ಸಂಪುಟ ನಿರ್ಣಯ ತೆಗೆದುಕೊಂಡಿದೆ.
3. ಈ ಸಂಬಂಧ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ರವರು ಕಾರ್ಮಿಕ ವರ್ಗದ ಎಲ್ಲಾ ಮಹಿಳಾ ನೌಕರರಿಗೂ ಈ ಯೋಜನೆ ಅನ್ವಯಿಸುವಂತೆ ಪ್ರಸ್ತಾವನೆ ಸಲ್ಲಿಸಿದ್ದರು.
4. 1ಲಕ್ಷದ 80 ಸಾವಿರ ಮಹಿಳಾ ಸರ್ಕಾರಿ ನೌಕರರಿಗೆ ಈ ಆದೇಶದಿಂದ ಅನುಕೂಲವಾಗಲಿದೆ.
5. ತಿಂಗಳಿಗೆ ತಾವು ಬಯಸಿದ ಒಂದು ದಿನ ರಜೆಗೆ ಮಹಿಳಾ ನೌಕರರು ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದು.
6. ಈ ಸಂಬಂಧ ಅಧಿಕೃತ ಆದೇಶವನ್ನು ಸರ್ಕಾರ ಈ ವಾರ ಹೊರಡಿಸಲಿದೆ ಎಂದು ತಿಳಿಸಿದ್ದಾರೆ.

About The Author

Leave a Reply