November 8, 2025
WhatsApp Image 2025-10-11 at 9.13.04 AM

ಮುಸ್ಲಿಂ ದಂಪತಿಗೆ ಮದುವೆ ಸರ್ಟಿಫಿಕೆಟ್ ನೀಡುವ ಅಧಿಕಾರ ವಕ್ಫ್ ಮಂಡಳಿಗೆ ಇಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಮದುವೆ ಸರ್ಟಿಫಿಕೆಟ್ ನೀಡುವ ಅಧಿಕಾರವನ್ನು ರಾಜ್ಯ ವಕ್ಫ್ ಮಂಡಳಿಗೆ ನೀಡಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಮೂಲಕ ರಾಜ್ಯ ಸರ್ಕಾರ 2023ರ ಆ.30ರಂದು ಆದೇಶಿಸಿತ್ತು. ಈ ಆದೇಶ ರದ್ದು ಕೋರಿ ಬೆಂಗಳೂರಿನ ಎ.ಆಲಂ ಪಾಷಾ ಎಂಬುವರು 2024ರಲ್ಲಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ವೇಳೆ ಸರ್ಕಾರದ ಪರ ವಕೀಲರು, 2023ರ ಆ.30ರಂದು ಹೊರಡಿಸಿದ್ದ ಆದೇಶ ಹಿಂಪಡೆಯಲಾಗಿದೆ ಎಂದು ತಿಳಿಸಿ ಪ್ರಮಾಣ ಪತ್ರ ಸಲ್ಲಿಸಿದರು. ಸರ್ಕಾರದ ಪರ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ ಮುಸ್ಲಿಂ ದಂಪತಿಗೆ ಮದುವೆ ಸರ್ಟಿಫಿಕೆಟ್ ನೀಡುವ ಅಧಿಕಾರ ವಕ್ಫ್ ಮಂಡಳಿಗೆ ಇಲ್ಲ ಎಂದು ಆದೇಶಿಸಿದೆ.

About The Author

Leave a Reply