

ಉಳ್ಳಾಲ: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪ ಸಂಬಂಧ ಮೂವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಮುಹಮ್ಮದ್ ಹನೀಫ್ (48), ಮನೋಜ್ (56) ಹಾಗೂ ಉಮರ್ ಫಾರೂಕ್ ಬಂಧಿತ ಆರೋಪಿಗಳು.
ಇವರು ದೇಶ ವಿರೋಧಿ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






