October 20, 2025
WhatsApp Image 2025-10-15 at 10.16.37 AM

ರಾಜ್ಯ ಸರ್ಕಾರದಿಂದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಾತಿಗಣತಿ ವೇಳೆ ಲೋಪವಾಗಿದೆ. ಕರ್ತವಲೋಪ್ಯ ಎಸಗಿದ 13 ಸಿಬ್ಬಂದಿಗಳಿಗೆ ಇದೀಗ ನೋಟಿಸ್ ಜಾರಿ ಮಾಡಲಾಗಿದೆ. ಗಣಿತಿದಾರರಿಗೆ ನಗರ ಪಾಲಿಕೆ ಜಂಟಿ ಆಯುಕ್ತರಿಂದ ನೋಟಿಸ್ ಜಾರಿಗೊಳಿಸಲಾಗಿದೆ.

5ಕ್ಕಿಂತ ಕಡಿಮೆ ಮನೆಗಳಿಗೆ ಗಣಿತ ಮಾಡಿರುವ ಆರೋಪ ಕೇಳಿ ಬಂದಿದೆ ಈ ಹಿನ್ನೆಲೆಯಲ್ಲಿ ಗಣತಿಗೆ ನೇಮಿಸಿದ 13 ಮಂದಿ ಮೇಲ್ವಿಚಾರಕರಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ನಿಮ್ಮಿಂದ ಗಣತಿ ಕಾರ್ಯ ಪ್ರಗತಿ ಕುಂಠಿತಗೊಂಡಿದೆ. ಸರ್ಕಾರದ ಆದೇಶಕ್ಕೆ ಕಿಂಚಿತ್ತು ಬೆಲೆ ಕೊಟ್ಟಿಲ್ಲ ಮೇಲ್ನೋಟಕ್ಕೆ ಕರ್ತವ್ಯ ಲೋಪ ಕಂಡು ಬಂದಿದೆ ಕೆಳಹಂತದ ಗಣಿತಿದಾರರಿಗೆ ಸರಿಯಾದ ಮಾರ್ಗದರ್ಶನ ನೀಡಿಲ್ಲ. ತಲುಪದ 24 ಗಂಟೆಯಲ್ಲಿ ಉತ್ತರ ನೀಡಬೇಕು ಎಂದು ಸೂಚನೆ ಸೂಚಿಸಲಾಗಿದೆ. ಸಮರ್ಪಕ ಉತ್ತರ ನೀಡದಿದ್ದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.

About The Author

Leave a Reply