

ರಾಜ್ಯದ ಸರ್ಕಾರಿ ಜಾಗದಲ್ಲಿ ರಾಷ್ಟ್ರೀಯ ಸ್ವಯಂಸೇವಾ ಸಂಘಟನೆಯ ಚಟುವಟಿಕೆ ನಿಷೇಧ ಬಹುತೇಕ ಖಚಿತವಾಗಿದೆ. ಈ ಸುಳಿವನ್ನು ಸ್ವತಹ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದುಷ್ಟ ಶಕ್ತಿಗಳು ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕುತ್ತಿವೆ. ಆ ಬೆದರಿಕೆಗೆ ಪ್ರಿಯಾಂಕ್ ಖರ್ಗೆ ಜಗ್ಗಲ್ಲ, ನಾವು ಸಹ ಜಗ್ಗಲ್ಲ. ಪ್ರಿಯಾಂಕ್ ಖರ್ಗೆ ಬರೆದಿರುವಂತ ಪತ್ರದಲ್ಲಿ ತಪ್ಪೇನಿದೆ ಹೇಳಿ ಎಂದು ಪ್ರಶ್ನಿಸಿದರು.
ತಮಿಳುನಾಡಿನಲ್ಲಿ ಸರ್ಕಾರಿ ಜಾಗದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿಷೇಧಿಸಲಾಗಿದೆ. ತಮಿಳುನಾಡಿದಂತೆ ಕರ್ನಾಟಕದಲ್ಲಿ ಜಾರಿ ಮಾಡಿ ಎಂದು ಹೇಳಿದ್ದಾರೆ. ನಾವು ಪ್ರಿಯಾಂಕ್ ಖರ್ಗೆ ಪತ್ರವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ. ತಮಿಳುನಾಡಿನಿಂದ ಆ ಆದೇಶದ ವರದಿಯನ್ನು ತರಿಸಿಕೊಳ್ಳುತ್ತಿದ್ದೇವೆ. ಈ ಬಗ್ಗೆ ಗಮನಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೇಳಿದ್ದೇನೆ. ಸಿಎಸ್ ಪರಿಶೀಲಿಸಿದ ಬಳಿಕ ಕ್ರಮ ತೆಗೆದುಕೊಳ್ಳುತ್ತೇವೆ ಎಂಬುದಾಗಿ ತಿಳಿಸಿದರು.
ಬಿಜೆಪಿಯವರು ಯಾವಾಗಲೂ ಧಮ್ ಇದ್ರೆ ಬ್ಯಾನ್ ಮಾಡಿ ಎಂದು ಹೇಳುತ್ತಾರೆ. ಕಳೆದ ಚುನಾವಣೆ ಆ ರೀತಿ ಹೇಳಿದ್ದರು. ನಂತ್ರ ಏನಾಯ್ತು ಗೊತ್ತಲ್ವ? ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದರು.