October 20, 2025
WhatsApp Image 2025-10-18 at 3.29.21 PM

ಪುತ್ತೂರು: ಅ.17ರಂದು ಸಂಜೆ ಆಟೋ ಚಾಲಕ ಬಶೀರ್ ಕುರಿಯ ಗ್ರಾಮ ಎಂಬವರು ಸಮವಸ್ತ್ರ ಧರಿಸಿದೇ ಆಟೋ ಚಲಾಯಿಸಿಕೊಂಡು ಬರುತ್ತಿರುವಾಗ, ಕರ್ತವ್ಯದಲ್ಲಿದ್ದ ಪುತ್ತೂರು ಸಂಚಾರ ಪೊಲೀಸ್‌ ಠಾಣಾ ಚಿದಾನಂದ ರೈ, ಎ.ಎಸ್.ಐ ಮತ್ತು ಸಿಪಿಸಿ 2283,  ಶ್ರೀ ಶೈಲ ಎಂ ಕೆ,  ಕೈ ಸನ್ನೆ ಮೂಲಕ ನಿಲ್ಲಿಸಲು ಸೂಚಿಸಿದ್ದರೂ, ತನ್ನ ವಾಹನವನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿಕೊಂಡು ಬಂದು ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆ ಮಾಡಿದ್ದು ಈ ಕುರಿತು ಬಶೀರ್ ಅವರನ್ನು ಹಿಂಬಾಲಿಸಿ ವಾಹನವನ್ನು ತಡೆದು ಆತನನ್ನು  ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈಯಿಂದ ಹಲ್ಲೆ ಮಾಡಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್‌ ಆಗಿದೆ.

ಇದನ್ನು ಪರಿಶೀಲಿಸಿ ಚಿದಾನಂದ ರೈ, ಎ.ಎಸ್.ಐ ಮತ್ತು ಸಿಪಿಸಿ 2283,  ಶ್ರೀ ಶೈಲ ಎಂ ಕೆ ರವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಎಸ್ಪಿ ತಿಳಿಸಿದ್ದಾರೆ.

About The Author

Leave a Reply