

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬಾರ್ ಎದುರು ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ರೌಡಿ ಶೀಟರ್ ಗುರುರಾಜ್ ಆಚಾರಿಯನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದಲ್ಲಿ ಆರೋಪಿಗಳಿಗೆ ಆಶ್ರಯ ನೀಡಿದ್ದ ಮತ್ತೊಬ್ಬ ಆರೋಪಿ ಅಶೋಕ್ ಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ವರದಿಗಳ ಪ್ರಕಾರ, ಬಾರ್‌ನೊಳಗೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯು ತೀವ್ರಗೊಂಡು ಹೊರಗೆ ಚಾಕು ಇರಿತದಲ್ಲಿ ಅಂತ್ಯಗೊಂಡಿತ್ತು.ಈ ಘಟನೆಯಲ್ಲಿ ಗಾಯಗೊಂಡಿರುವ ನಿಝಾಮ್ ಮತ್ತು ಹಸನ್ ಮುಕ್ಷಿತ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಅಕ್ಟೋಬರ್ 24ರಂದು, ಪೊಲೀಸರು ಆರೋಪಿಗಳಾದ ಸುಶಾಂತ್, ಅಲೆಕ್ಸ್, ನಿತಿನ್ ಮತ್ತು ಆರೋಪಿಗಳಿಗೆ ಸಹಾಯ ಮಾಡಿದ್ದ ಆರೋಪದ ಮೇಲೆ ಅರುಣ್ ಶೆಟ್ಟಿ ಅವರನ್ನು ಬಂಧಿಸಿದ್ದರು.






