

ಕೊಳ್ನಾಡು: ಸಮನ್ವಯ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ಸಾಲೆತ್ತೂರು, ಕೊಳ್ನಾಡು ಇವರ ಆಶ್ರಯದಲ್ಲಿ ಸ್ಥಳೀಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಕೂಟ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರೂ, ಕೊಳ್ನಾಡು ಗ್ರಾಮದ ಅಭಿವೃದ್ಧಿಯ ಹರಿಕಾರರೂ, ಸಾಲೆತ್ತೂರು ನವಪೇಟೆಯ ನಿರ್ಮಾತೃ ಶ್ರೀ ಕುಳಾಲು ಸುಭಾಷ್ಚಂದ್ರ ಶೆಟ್ಟಿ ಭಾಗವಹಿಸಿ ಪಂದ್ಯಾಕೂಟಕ್ಕೆ ಶುಭಾಶಯ ಕೋರಿದರು.

ಮೂರು ಅವಧಿಗಳ ಕಾಲ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದರೂ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ದಶಕಕ್ಕಿಂತಲೂ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಹಾಗೂ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಪ್ರಮುಖ ಪಾತ್ರವಹಿಸಿ ಪ್ರಸ್ತುತ ಕೆಪಿಸಿಸಿಯ ಪ್ರಧಾನ ಕಾರ್ಯದರ್ಶಿ ಎಂ. ಎಸ್. ಮಹಮ್ಮದ್ ಜನಮನ್ನಣೆ ಗಳಿಸಿರುವ ಹಿನ್ನೆಲೆಯಲ್ಲಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ಅಲ್ಲದೆ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ. ರವಿರಾಜ್ ರೈ ಕುಳಾಲು, ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕಿ ಲತಾ ಸಿ. ರೈ ಇವರಿಗೂ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಕೊಳ್ನಾಡು ವಲಯ ಕಾಂಗ್ರೆಸ್ ಮುಖಂಡ ಖಾದರ್ ಮೂಸಾ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಲತೀಪ್ ಪರ್ತಿಪ್ಪಾಡಿ, ಸಾಮಾಜಿಕ ಮುಂದಾಳು ಹಸೈನಾರ್ ತಾಳಿತ್ತನೂಜಿ, ಸಂಘಟಕರಾದ ಶಪೀಕ್ ಕಟ್ಟೆ, ಹಫೀಝ್ ಸಾಲೆತ್ತೂರು, ಉಮ್ಮರ್ ಕುಂಞ ಸಾಲೆತ್ತೂರು, ಬಶೀರ್ ಕೊಳ್ನಾಡು ಸೇರಿದಂತೆ ಅನೇಕರು ಉಪಸ್ಥಿತರಿದ್ದರು






