November 24, 2025
WhatsApp Image 2025-09-11 at 2.23.08 PM

ಮಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಈಗಾಗಲೇ ಭಾರಿ ಚರ್ಚೆ ನಡೆಯುತ್ತಿದ್ದು ಅದರ ಜೊತೆಗೆ ಸಂಪುಟ ಪುನಾರ ರಚನೆ ಕುರಿತಂತೆ ಹಲವು ನಾಯಕರು ಹೇಳಿಕೆಗಳನ್ನು ನೀಡುತ್ತಿದ್ದಾರೆ ಇದೀಗ ಐದು ವರ್ಷಗಳ ಕಾಲ ನೀವೇ ಮುಖ್ಯಮಂತ್ರಿನ ಅಂತ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ತೀರ್ಮಾನ ಮಾಡಿದರೆ ನಾನೇ ಮುಖ್ಯಮಂತ್ರಿ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಕೆ ಎನ್ ರಾಜಣ್ಣ ಅವರು 5 ವರ್ಷಗಳ ಕಾಲ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರಿಯಲಿದ್ದಾರೆ ಅದಕ್ಕೆ ನಿಮ್ಮ ಅಭಿಪ್ರಾಯ ಏನು ಅಂತ ಕೇಳಿದಾಗ ಒಂದು ವೇಳೆ ಹೈಕಮಾಂಡ್ ಮನಸ್ಸು ಮಾಡಿದರೆ ಐದು ವರ್ಷಗಳ ಕಾಲ ಕೂಡ ನಾನೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತೇನೆ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಒಂದು ಹೇಳಿಕೆ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಸಿಎಂ ಆಗಲು ತುದಿಗಾಲಲಿ ನಿಂತಿರುವ ಎಲ್ಲ ನಾಯಕರಿಗೂ ಸ್ಪಷ್ಟ ಸಂದೇಶ ನೀಡಿದ್ದಾರೆ ಎನ್ನಲಾಗುತ್ತಿದೆ.

About The Author

Leave a Reply