October 28, 2025
WhatsApp Image 2025-10-28 at 6.26.56 PM

ಮಂಗಳೂರು: ಮೀನು ಸಾಗಾಟದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ, ಮಗುಚಿ ಬಿದ್ದ ಪರಿಣಾಮ ವಾಹನದಲ್ಲಿದ್ದ ಮೂವರು ಗಾಯಗೊಂಡ ಘಟನೆ ಜಪ್ಪಿನಮೊಗರು ನೇತ್ರಾವತಿ ಸೇತುವೆಯಲ್ಲಿ ನಡೆದಿದೆ.

ವಾಹನದ ಚಾಲಕ ರತೀಶ್ (38), ವಾಹನದಲ್ಲಿದ್ದ ಶೈಲಜಾ (57) ಮತ್ತು ಶಾರದಾ(60) ಗಾಯಗೊಂಡವರು ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರನ್ನು ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ಬೆಳಗ್ಗೆ 6 ಗಂಟೆಯ ಹೊತ್ತಿಗೆ ಮೀನು ಸಾಗಾಟದ ಈ ಪಿಕ್ ವಾಹನ (ಕೆಎಲ್ 14 ಎನ್ 8273). ಮಂಗಳೂರಿನಿಂದ ಕೇರಳದ ತಲಪಾಡಿ ಕಡೆಗೆ ಹೋಗುತ್ತಿದ್ದಾಗ ಚಾಲಕನ ನಿರ್ಲಕ್ಷ್ಯತನದಿಂದ ವಾಹನ ಸ್ಕಿಡ್ ಆಗಿ ಮಗುಚಿ ಬಿದ್ದ ಪರಿಣಾಮವಾಗಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

About The Author

Leave a Reply