

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು , ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.
ಮಾರ್ನಬೈಲು ನಿವಾಸಿ ಪ್ರೀತಂ ಲೋಬೋ ಎಂಬವರು ಕಾಣೆಯಾಗಿರುವ ವ್ಯಕ್ತಿ. ಬೆಳಿಗ್ಗೆ ಸುಮಾರು 8 ಗಂಟೆ ವೇಳೆಗೆ ತನ್ನ ಬ್ಯಾಟರಿ ಚಾಲಿತ ರಿಕ್ಷಾವನ್ನು ಪಾಣೆಮಂಗಳೂರು ಹಳೆಯ ಸೇವೆಯಲ್ಲಿ ನಿಲ್ಲಿಸಿ ನಾಪತ್ತೆಯಾಗಿದ್ದು, ಈ ಬಗ್ಗೆ ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.
ಇದೀಗ ರಿಕ್ಷಾದ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅವರು ರಿಕ್ಷಾ ನಿಲ್ಲಿಸಿ ನದಿಗೆ ಹಾರಿರಬಹುದು ಎಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಬಂಟ್ವಾಳ ನಗರ ಠಾಣಾ ಪೋಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗಳು ನೇತ್ರಾವತಿ ನದಿಯಲ್ಲಿ ಶೋಧ ಕಾರ್ಯನಡೆಸುತ್ತಿದ್ದಾರೆ.






