

ಮದುವೆ ಸಮಾರಂಭಕ್ಕೆದು ಆಗಮಿಸುತ್ತಿದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಸಮೀಪದ ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ನಡೆದಿದೆ.
ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದ ಸಭಾಭವನದಲ್ಲಿ ನಡೆಯುತ್ತಿದ್ದ ಮದುವೆಗೆ ಆಗಮಿಸುತ್ತಿದ್ದ ವೇಳೆ ಟೆಂಪೋ ವಾಹನ ಬಿಸಿಲೆ ಘಾಟ್ ಸಮೀಪ ಚಾಲನ ನಿಯಂತ್ರಣ ಕಳೆದುಕೊಂಡು, 20ಕ್ಕೂ ಅಧಿಕ ಆಳಕ್ಕೆ ಪಲ್ಟಿಯಾಗಿದೆ. ಘಟನೆಯಲ್ಲಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಕೆಲವರು ಗಂಭೀರ ಗಾಯಗೊಂಡಿದ್ದು, ಅವರನ್ನು ಪ್ರಥಮ ಚಿಕಿತ್ಸೆಗಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ.






