

ಬಂಟ್ವಾಳ: ಅ.30ರಂದು ಬಿಸಿಲೆ ಘಾಟ್ ಘಾಟ್ ನಲ್ಲಿ ಸಂಭವಿಸಿದಅಪಘಾತದ ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ಸಮಯ ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿ ಗಂಭೀರ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲು ಸೂಚಿಸಿದ್ದು ಅದರಂತೆ ಪುತ್ತೂರಿನಿಂದ ಮಂಗಳೂರಿಗೆ ಅಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ ಸಮಯ ಮದ್ಯಾಹ್ನ 1.30 ಗಂಟೆಗೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್ ಜಿ ಸರ್ಕಲ್ಲಿಂದ ಅಂಬ್ಯುಲೆನ್ಸ್ ಮುಂದಿನಿಂದ ದ್ವಿಚಕ್ರ ವಾಹನ ಸವಾರನೋರ್ವ ಅಂಬ್ಯುಲೆನ್ಸ್ ನ ಸೈರನ್ ಶಬ್ದ ಕೇಳಿಯೂ ಅಂಬ್ಯುಲೆನ್ಸ್ ಗೆ ದಾರಿ ಬಿಟ್ಟು ಕೊಡದೆ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದ.
ಈ ಹಿನ್ನೆಲೆಯಲ್ಲಿ ಬೆಟ್ಟಂಪಾಡಿ ಗ್ರಾಮದ ಮಹಮ್ಮದ್ ಮನ್ಸೂರು (38ವ) ಎಂಬವರ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ 128/2025 ಕಲಂ: 110, 125 ಬಿ.ಎನ್.ಎಸ್ ನಂತೆ ಪ್ರಕರಣ ದಾಖಲಿಸಿ ವಶಕ್ಕೆ ಪಡೆದುಕೊಂಡಿದ್ದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.






