

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಂಚಿಕೊಂಡಿರುವ ಆರೋಪದಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರ್‌ಎಸ್‌ಎಸ್ ಮುಖಂಡರೊಬ್ಬರ ಭಾಷಣದ ತುಣುಕುಗಳನ್ನು ಹಂಚಿಕೊಂಡ ಆರೋಪದಲ್ಲಿ ಶರಣ್ ಪಂಪ್‌ವೆಲ್ ಅವರನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಶರಣ್ ಪಂಪ್ ವೆಲ್ ಅವರನ್ನು ವಶಕ್ಕೆ ಪಡೆಯುತ್ತಿದ್ದಂತೆ ಕದ್ರಿ ಠಾಣೆ ಎದುರು ಕಾರ್ಯಕರ್ತರು ಜಮಾಯಿಸಿದ್ದರು.






