

ಉಳ್ಳಾಲದ ರಾ.ಹೆ.66 ರ ಅಡಂ ಕುದ್ರು ಎಂಬಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಢಿಕ್ಕಿಯಾಗಿ ರಸ್ತೆಗೆಸೆಯಲ್ಪಟ್ಟ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಗುರುವಾರ (ಇಂದು) ಸಂಭವಿಸಿದೆ.
ಮೃತರನ್ನು ಬೊಕ್ಕಪಟ್ಟ ಬೆಂಗ್ರೆ ನಿವಾಸಿ ನಾಗೇಶ್ ಪುತ್ರನ್(62) ಎಂದು ತಿಳಿದು ಬಂದಿದೆ.
ಅಡಂಕುದ್ರು ಎಂಬಲ್ಲಿ ನಾಗೇಶ್ ಅವರ ಸ್ಕೂಟರ್ ಗೆ ತೊಕ್ಕೊಟ್ಟುವಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ನಾಗೇಶ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿಯಲಾಗಿದೆ.
ಈ ಕುರಿತು ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.






