January 17, 2026
WhatsApp Image 2025-11-03 at 10.39.14 AM

ಮುಲ್ಕಿ: ಕಾರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಕಿನ್ನಿಗೋಳಿ-ಎಸ್.ಕೋಡಿ ಬಳಿಯ ರೋಹನ್ ಎಸ್ಟೇಟ್ ಮುಂಭಾಗ ನಡೆದಿದೆ.

ಘಟನೆಯಿಂದ ಮುಲ್ಕಿ ಪುನರೂರು ಮೊಗೇರ ದೈವಸ್ಥಾನ ಬಳಿಯ ನಿವಾಸಿಗಳಾದ ಸುರೇಂದ್ರ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದರು. ರವಿವಾರ ಸಂಜೆ ಸಾವನ್ನಪ್ಪಿದ್ದು ಹಿಂಬದಿ ಸವಾರ ಸಂದೀಪ್ ಯಾನೆ ಲೋಲಾಕ್ಷ ಎಂಬವರಿಗೆ ಅಲ್ಪಪ್ರಮಾಣದ ಗಾಯಗಳಾಗಿವೆ.

ಗಾಯಾಳುಗಳು ಎಸ್. ಕೋಡಿಯಾಗಿ ಹಳೆಯಂಗಡಿ ಕಡೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಅತಿಯಾದ ವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಮಾಡಿಕೊಂಡು ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿತ್ತು.

About The Author

Leave a Reply