November 8, 2025
WhatsApp Image 2025-11-03 at 3.52.30 PM

ಮಂಗಳೂರು: ನಗರ ಹೊರವಲಯದ ಅಡ್ಯಾರ್ ಪದವು ಎಂಬಲ್ಲಿನ ಮನೆಯೊಂದರಲ್ಲಿ ರವಿವಾರ ಸಂಜೆ ಎಸಿ ಸ್ಫೋಟಗೊಂಡು ಅಪಾರ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿದೆ.

ಫೈಝಲ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಕೃತ್ಯ ನಡೆಯುವಾಗ ಮನೆಯಲ್ಲಿ ಯಾರೂ ಇರಲಿಲ್ಲ ಮತ್ತು ಮನೆಗೆ ಬೀಗ ಹಾಕಲಾಗಿತ್ತು ಎನ್ನಲಾಗಿದೆ. ಸಂಜೆಯ ವೇಳೆಗೆ ಮನೆಯೊಳಗಿನಿಂದ ಹೊಗೆ ಹೊರಬರುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ತಕ್ಷಣ ಮನೆಯ ಬಾಗಿಲು ಮುರಿದು ಒಳಹೊಕ್ಕಿ ಬೆಂಕಿ ನಂದಿಸಿರುವುದಾಗಿ ತಿಳಿದು ಬಂದಿದೆ.

ಫೈಝಲ್ ಅವರು ಬೇರೊಂದು ಮನೆಯಲ್ಲಿ ವಾಸವಾಗಿದ್ದರು. ಇತ್ತೀಚೆಗೆ ಈ ಮನೆಯಲ್ಲಿ ಮತ್ತೆ ವಾಸಿಸಲು ಬೇಕಾದ ಸಿದ್ಧತೆ ಮಾಡಿಕೊಂಡಿದ್ದರು. ಅದರಂತೆ ನಾಲೈದು ದಿನದ ಹಿಂದೆ ಎಸಿ ಅಳವಡಿಸಿದ್ದರು ಎನ್ನಲಾಗಿದೆ. ರವಿವಾರ ಸಂಜೆ ಈ ಎಸಿ ಸ್ಪೋಟಗೊಂಡಿದೆ. ಮನೆಯ ಬಾಗಿಲು ಮುಚ್ಚಲ್ಪಟ್ಟ ಕಾರಣ ಹೊಗೆ ಆವರಿಸಿದೆ, ಬೆಂಕಿ ಕಾಣಿಸಿದೆ. ಇದರಿಂದ ಪೀಠೋಪಕರಣಗಳು, ಬಟ್ಟೆಬರೆ, ನಗದು, ಪಾಸ್‌ಪೋರ್ಟ್ ಸಹಿತ ಮನೆಯ ಬೆಲೆ ಬಾಳುವ ಸಾಮಗ್ರಿಗಳು ಸುಟ್ಟು ಕರಕಲಾಗಿವೆ ಎಂದು ತಿಳಿದು ಬಂದಿದೆ.

About The Author

Leave a Reply