

ಮಂಗಳೂರಿನಲ್ಲಿ ಕಳೆದ 20 ವರ್ಷಗಳಿಂದ ಯಶಸ್ವೀ ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ಹಾಶೀಂಖಾನ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೂಲತಃ ಉತ್ತರ ಪ್ರದೇಶ ನಿವಾಸಿಯಾಗಿರುವ ಹಾಶೀಂಖಾನ್ ಕಾರ್ಯಕ್ರಮವೊಂದರ ನಿಮಿತ್ತ ಮಂಗಳೂರಿನಿ0ದ ಉತ್ತರಪ್ರದೇಶಕ್ಕೆ ತೆರಳಿದ್ದರು. ಅಲ್ಲಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಉದ್ಯೋಗದ ನಿಮಿತ್ತ ಹಾಶೀಂಖಾನ್ ಅವರು ಸಣ್ಣ ವಯಸ್ಸಿನಲ್ಲೇ ಮಂಗಳೂರಿಗೆ ಬಂದು ಯಶಸ್ವೀ ಉದ್ಯಮಿಯಾಗಿದ್ದರು. ಅಶಕ್ತರಿಗೆ, ಬಡಕುಟುಂಬಗಳಿಗೆ ಆರ್ಥಿಕ ನೆರವು ನೀಡುತ್ತಿದ್ದರು. ಅವರ ಅಕಾಲಿಕ ನಿಧನಕ್ಕೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.






