November 8, 2025
WhatsApp Image 2025-11-05 at 3.52.36 PM

ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಳಳ ಶವ ಶಿವಮೊಗ್ಗದ ಹಾಸ್ಟೆಲ್ ಟೆರಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಟಿ.ಸಿ.ವನೀಷಾ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ವನೀಷಾ ಭದ್ರಾವತಿ ತಾಲೂಕಿನ ದೊಡ್ಡೇರಿ ಗಂಗೂರು ಗ್ರಾಮದ ನಿವಾಸಿಯಾಗಿದ್ದಳು. ಶಿವಮೊಗ್ಗದ ಖಾಸಗಿ ಕಾಲೇಜಿನಲ್ಲಿ ತೃತೀಯ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದಳು. ಇಂದು ಬೆಳಗ್ಗೆ 10.15ರ ಸುಮಾರಿಗೆ. ಕೋಟೆ ರಸ್ತೆ ಬಳಿಯಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ಲಿನ ಟೆರಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಬೆಳಗ್ಗೆಯ ತಿಂಡಿ ಸೇವಿಸಿದ ನಂತರ ವಿದ್ಯಾರ್ಥಿನಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸ್ಟೆಲ್ನ ಇತರೆ ವಿದ್ಯಾರ್ಥಿನಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ. ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗಿದೆ.

About The Author

Leave a Reply