November 7, 2025
WhatsApp Image 2025-11-06 at 11.00.59 AM

ಧಾರವಾಡ : ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರಕ್ಕೆ ಸಂಬಂಧಪಟ್ಟಂತೆ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ತೆರವು ಕೊರಿದ್ದ ಅರ್ಜಿಯ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ನ ವಿಭಾಗೀಯ ಪೀಠ ರಾಜ್ಯ ಸರ್ಕಾರದ ಮೇಲ್ಮನವಿ ವಜಾಗೊಳಿಸಿದೆ.

ಸರ್ಕಾರಿ ಸಂಸ್ಥೆಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕದಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ವಿಭಾಗೀಯ ಪೀಠ ನಕಾರ, ತಡೆ ತೆರವಿಗೆ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿದೆ.

ಅಕ್ಟೋಬರ್ 28ರಂದು ಹೈಕೋರ್ಟ್ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ತಡೆಯಾಜ್ಞೆಯನ್ನು ಪ್ರಶ್ನಿಸಿ ರಾಜ್ಯ ಸರ್ಕಾರದ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ನವೆಂಬರ್ 4ರಂದು ನಡೆದಿದ್ದ ಅರ್ಜಿಯ ವಿಚಾರಣೆ ವಾದ ಪ್ರತಿವಾದ ಆಲಿಸಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು ಇಂದು ಹೈಕೋರ್ಟ್ ವಿಭಾಗೀಯ ಪೀಠ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ.

About The Author

Leave a Reply