November 7, 2025
WhatsApp Image 2025-11-06 at 4.06.25 PM

ಮೆಕ್ಕೆಜೋಳ ಖರೀದಿಯಲ್ಲಿ ಭಾರಿ ವಂಚನೆ ಆಗಿದೆ ಎನ್ನುವ ವಿಚಾರಕ್ಕೆ ಸಂಬಂಧಪಟ್ಟಂತೆ, ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ಜಮೀರ್ ಅಹ್ಮದ್ ಖಾನ್ ಗೆ ಸಂಕಷ್ಟ ಎದುರಾಗಿದ್ದು, ಜಮೀರ್ ಅಹ್ಮದ್ ಖಾನ್ ವಿರುದ್ಧ ರಾಜ್ಯಪಾಲರಿಗೆ ಜೆಡಿಎಸ್ ದೂರು ನೀಡಿದೆ. ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ದೂರು ನೀಡಿದ್ದಾರೆ.

ಸಂಪುಟದಿಂದ ಸಚಿವ ಜಮೀರ್ ಅಹ್ಮದ್ ಖಾನ್ ರನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ವಂಚನೆ ಮಾಡಿದ ವ್ಯಕ್ತಿಯ ಪರವಾಗಿ ಜಮೀರ್ ನಿಂತಿರುವ ಆರೋಪ ಕೇಳಿ ಬಂದಿದೆ. ಹೈದರಾಬಾದ್ ವ್ಯಕ್ತಿಗೆ ಜಮೀರ್ ಅಹ್ಮದ್ ಸಹಕರಿಸುವಂತೆ ಫೋನ್ ಕರೆ ಮಾಡಿದ್ದರಂತೆ, ಅಲ್ಲದೇ ಆರೋಪಿ ಅಕ್ಬರ್ ಪಾಷಾಗೆ ಸರ್ಕಾರಿ ವಾಹನ ಬಳಕೆ ಮಾಡಲು ಕೂಡ ಜಮೀರ್ ಅಹ್ಮದ್ ಅವಕಾಶ ಮಾಡಿಕೊಟ್ಟಿರುವ ಆರೋಪ ಕೇಳಿಬಂದಿದೆ. ಹೀಗಾಗಿ ರಾಜ್ಯಪಾಲರಿಗೆ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎನ್ನುವವರು ದೂರು ನೀಡಿದ್ದು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.

About The Author

Leave a Reply