November 24, 2025
WhatsApp Image 2025-11-12 at 9.22.50 AM

ನಟ ಉಪೇಂದ್ರ ಹಾಗೂ ಅವರ ಪತ್ನಿ ಪ್ರಿಯಾಂಕ ಅವರ ಮೊಬೈಲ್ ನಂಬರ್ ಹ್ಯಾಕ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಮೊಬೈಲ್ ಹ್ಯಾಕ್ ಮಾಡಿದ ಬಿಹಾರ ಮೂಲದ ವಿಕಾಸ್ ಕುಮಾರ್ ನನ್ನು ಬಂಧಿಸಿದ್ದಾರೆ. ಸದಾಶಿವನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಕೆಲ ದಿನಗಳ ಹಿಂದೆ ನಟ ಉಪೇಂದ್ರ ದಂಪತಿಯ ಫೋನ್ ನಂಬರ್ ಹ್ಯಾಕ್ ಮಾಡಲಾಗಿತ್ತು. ಈ ಬಗ್ಗೆ ನಟ ಉಪೇಂದ್ರ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡು, ನನ್ನ ಹಾಗೂ ಪ್ರಿಯಾಂಕಾ ಮೊಬೈಲ್ ನಂಬರ್ ಹ್ಯಾಕ್ ಆಗಿದೆ ಎಂದು ತಿಳಿಸಿದ್ದರು.

About The Author

Leave a Reply