

ವಿಟ್ಲ: ಕನ್ಯಾನ ನಿವಾಸಿ ಆನಂದ (39) ಎಂಬವರಿಗೆ ದಿನಾಂಕ:16-09-2020 ರಂದು ಆರೋಪಿಗಳಾದ ಅಜೀಝ್, ತೋಯಿಬ್, ಆಶೀಪ್, ಕಲೀಲ್, ಅಜೀಝ್ ಹಾಗೂ ಇತರರು ಸೇರಿ ಅವ್ಯಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದ ಘಟನೆಗೆ ಸಂಬಂಧಿಸಿದಂತೆ, ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 135/2020, ಕಲಂ; 143,147, 148,341, 323,324, 504,506 ಜೊತೆಗೆ 149 ರಂತೆ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ಆರೋಪಿಗಳ ಪೈಕಿ ಬಂಟ್ವಾಳ, ಕನ್ಯಾನ ನಿವಾಸಿ ಮೊಯಿದ್ದೀನ ಶಾಕೀರ್ ಯಾನೆ ಮೊಯಿದ ಶಾಕೀರ (27) ಎಂಬಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡು ವಿದೇಶಕ್ಕೆ ತೆರಳಿರುತ್ತಾನೆ.ಆರೋಪಿ ಮೇಲೆ ಮಾನ್ಯ ನ್ಯಾಯಾಲಯವು ದಸ್ತಗಿರಿ ವಾರೆಂಟ್ ಜಾರಿಯಾಗಿರುತ್ತದೆ.ದಿನಾಂಕ:13.11.2025 ರಂದು ಪ್ರಕರಣದ ಸದ್ರಿ ಆರೋಪಿಯನ್ನು ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸ್ತಗಿರಿ ಮಾಡಿ, ದಿನಾಂಕ:14.11.2025 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ಮಾನ್ಯ ನ್ಯಾಯಾಲಯವು ಆರೋಪಿಯನ್ನು ಸೂಕ್ತ ಜಾಮೀನಿನೊಂದಿಗೆ ಬಿಡುಗಡೆ ಮಾಡಿರುತ್ತದೆ.






