

ಒಂದು ವಾರದಲ್ಲಿ ಹಣವನ್ನು ಡಬಲ್ ಮಾಡಿ ಕೊಡುವುದಾಗಿ ಆಮಿಷವೊಡ್ಡಿ, ಸಾರ್ವಜನಿಕರಿಗೆ ಕೋಟ್ಯಾಂತರ ರೂಪಾಯಿ ಪಂಗನಾಮ ಹಾಕಿ ದಾವಣಗೆರೆಯಲ್ಲಿ ಖತರ್ನಾಕ್ ದಂಪತಿ ಎಸ್ಕೇಪ್ ಆಗಿದ್ದಾರೆ.
ನಿವಾಸಿಗಳಾದ ಬೊಗ್ಗು ಶ್ರೀರಾಮಲು- ಪುಷ್ಪಾ ವಂಚಿಸಿ ಎಸ್ಕೆಪ್ ಆಗಿರುವ ದಂಪತಿ ಎಂದು ಗುರುತಿಸಲಾಗಿದೆ. ಈ ದಂಪತಿ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ವಿವಿಧ ಗ್ರಾಮಗಳ ಮಹಿಳೆಯರಿಗೆ ವಂಚಿಸಿ ಪರಾರಿಯಾಗಿದ್ದಾರೆ.
ಮನಿ ಡಬಲ್ ಆಸೆಗೆ ರೇಣುಕಮ್ಮ ಎಂಬವರು ಜಮೀನು ಮಾರಾಟ ಮಾಡಿ 33 ಲಕ್ಷ ರೂ. ನೀಡಿದ್ದರು. ಅಲ್ಲದೇ ಮೀನಾ 40 ಲಕ್ಷ ರೂ. ಪ್ರಿಯಾಂಕ 50 ಲಕ್ಷ ರೂ. ನೀಡಿದ್ದಾರೆ. ಇನ್ನು ಟಿ. ತಿರುಮಲೇಶ್ ಎಂಬವರು 17 ಲಕ್ಷ ರೂ. ನೀಡಿ ಮೋಸ ಹೋಗಿದ್ದಾರೆ.
ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಹಣ ಹಾಕಿ ಡಬಲ್ ಮಾಡುವ ಎಂದು ವಂಚಕ ದಂಪತಿ ನಂಬಿಸಿದ್ದರು. ವಂಚನೆಗೊಳಗಾದವರು ಜಗಳೂರು ಠಾಣೆಗೆ ದೂರು ನೀಡಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಜಗಳೂರು ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಹಣದ ಆಸೆಗೆ ಬಿದ್ದ ಜನರು ಕಂಗಾಲಾಗಿದ್ದಾರೆ.






