November 24, 2025
WhatsApp Image 2025-11-20 at 9.58.04 AM

ಬೆಂಗಳೂರು: ಇಂದು ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಷಡ್ಯಂತ್ರ ರೂಪಿಸಿದವರ ವಿರುದ್ಧ ತನಿಖೆ ನಡೆಸುತ್ತಿರುವಂತ ವಿಶೇಷ ತನಿಖಾ ತಂಡ(SIT) ಚಾರ್ಜ್ ಶೀಟ್ ಸಲ್ಲಿಕೆ ಮಾಡುವ ಸಾಧ್ಯತೆಯಿದೆ.

ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಸುಜಾತ ಭಟ್, ವಿಠಲ್ ಗೌಡ ಸೇರಿದಂತೆ 6 ಮಂದಿ ವಿರುದ್ಧ ನಾಳೆ ಎಸ್ಐಟಿ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದೆ ಎನ್ನಲಾಗುತ್ತಿದೆ.

ತನಿಖಾಧಿಕಾರಿ ಜೀತೇಂದ್ರ ದಯಾಮಾ ಅವರು ಬರೋಬ್ಬರಿ 4,000 ಪುಟಗಳ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಚಿನ್ನಯ್ಯನನ್ನು ಬಂಧನ ಮಾಡಲಾಗಿದ್ದು, ಉಳಿದವರ ವಿಚಾರಣೆ ನಡೆಸಲಾಗಿತ್ತು. ಇನ್ನೂ ಷಡ್ಯಂತ್ರ ರೂಪಿಸಿ, ಅಪಪ್ರಚಾರ ಮಾಡಿರುವು ದೋಷಾರೋಪ ಹೊರಿಸಿ ಚಾರ್ಜ್ ಶೀಟ್ ಸಲ್ಲಿಸೋದಕ್ಕೆ ಎಸ್ಐಟಿ ತಯಾರಿ ನಡೆಸಿದೆ.

About The Author

Leave a Reply